Shreya Ghoshal - Male Ninthu Hoda Mele - From "Milana" текст песни

Текст песни Male Ninthu Hoda Mele - From "Milana" - Shreya Ghoshal




ಚಿತ್ರ: ಮಿಲನ
ಸಾಹಿತ್ಯ: ಜಯಂತ್ ಕಾಯ್ಕಿಣಿ
ಸಂಗೀತ: ಮನೋ ಮೂರ್ತಿ
ಗಾಯನ: ಸೋನು ನಿಗಮ್, ಶ್ರೇಯ ಘೋಶಾಲ್
ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
ಹೇಳುವದು ಏನು ಉಳಿದು ಹೋಗಿದೆ .
ಹೇಳಲಿ ಹೇಗೆ ತಿಳಿಯದಾಗಿದೆ
ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ .
ನೋವಿನಲ್ಲಿ ಜೀವ ಜೀವ ಅರಿತ ನಂತರ
ನಲಿವು ಬೇರೆ ಏನಿದೆ ಏಕೆ ಅಂತರ
ನಿನ್ನ ಹಾಡಿನಲ್ಲಿ ಇಂದು ಬೆರೆವ ಕಾತರ
ಒಂದೇ ಸಾರಿ ನೀ ಕೇಳೆಯ ಸ್ವರ
ಮನಸಲ್ಲಿ ಚೂರು ಜಾಗ ಬೇಕಿದೆ
ಕೇಳಲಿ ಹೇಗೆ ತಿಳಿಯದಾಗಿದೆ
ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ .
ಕಣ್ಣು ತೆರೆದು ಕಾಣುವ ಕನಸೆ ಜೀವನ
ಸಣ್ಣ ಹಠವ ಮಾಡಿದೇ ಹೃದಯ ದಿನ
ಎದೆಯ ದೂರವಾಣಿಯ . ಕರೆಯ ರಿಂಗಣ
ಕೇಳು ಜೀವವೇ ಏತಕೀ ಕಂಪನ
ಹೃದಯವು ಇಲ್ಲೆ ಕಳೆದು ಹೋಗಿದೆ
ಹುಡುಕಲೇ ಬೇಕೆ ತಿಳಿಯದಾಗಿದೆ
ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
ಹೇಳುವುದು ಏನು ಉಳಿದು ಹೋಗಿದೆ?
ಹೇಳಲಿ ಹೇಗೆ ತಿಳಿಯದಾಗಿದೆ .



Авторы: manomurthy, jayanth kaykini


Внимание! Не стесняйтесь оставлять отзывы.